1-5ನೇ ತರಗತಿ ಶುರುವಿನ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?

256

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈಗಾಗ್ಲೇ 6ನೇ ತರಗತಿಯಿಂದ ಪಿಯುಸಿ ತನಕ ಕ್ಲಾಸ್ ಪ್ರಾರಂಭಿಸಲಾಗಿದೆ. ಹೀಗಾಗಿ 1-5ನೇ ತರಗತಿ ವಿದ್ಯಾರ್ಥಿಗಳ ಪಾಡೇನು ಅನ್ನೋ ಪ್ರಶ್ನೆಗೆ ಹಲವು ದಿನಗಳಿಂದ ಎಲ್ಲರಲ್ಲೂ ಗೊಂದಲ ಮೂಡಿದೆ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, 1-5ನೇ ತರಗತಿವರೆಗೂ ಶಾಲೆಗಳ ಪ್ರಾರಂಭದ ಬಗ್ಗೆ ಇನ್ನೂ ನಿರ್ಧರಿಸಿಲ್ಲವೆಂದು ಹೇಳಿದ್ದಾರೆ.

ಕೋವಿಡ್ 3ನೇ ಅಲೆಯ ಬಗ್ಗೆ ಸರ್ಕಾರ ಗಮನ ಹರಿಸಲಾಗುತ್ತಿದೆ. ಮಕ್ಕಳ ಮೇಲೆ ಪರಿಣಾಮ ಬೀರಬಹುದಾದ ವಿಚಾರದ ಬಗ್ಗೆ ಟಾಸ್ಕ್ ಪೋರ್ಸ್ ಗಂಭೀರವಾಗಿ ಅಧ್ಯಯನ ನಡೆಸಿದೆ. ಹೀಗಾಗಿ ಸಧ್ಯಕ್ಕೆ 1-5ನೇ ತರಗತಿ ಪ್ರಾರಂಭದ ಬಗ್ಗೆ ನಿರ್ಧರಿಸಿಲ್ಲವೆಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!