10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಜೆಸ್ಸಿಕಾ ಮೃತ ಬಾಲಕಿಯಾಗಿದ್ದಾಳೆ.

ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ ಮೆಂಟ್ ನಲ್ಲಿ ಜೆಸ್ಸಿಕಾ ಕುಟುಂಬ ವಾಸವಾಗಿದೆ. ತಂದೆ ಸಾಫ್ಟ್ ವೇರ್ ಇಂಜಿನಿಯರ್, ತಾಯಿ ಖಾಸಗಿ ಶಾಲೆಯ ಶಿಕ್ಷಕಿ. ಮುಂಜಾನೆ ಶಾಲೆಗೆ ಹೋದ ಜಸ್ಸಿಕಾ 10.30ರ ಸುಮಾರಿಗೆ ವಾಪಸ್ ಬಂದಿದ್ದಾಳೆ. ಇದು ಪೋಷಕರಿಗೆ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕಿ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗುತ್ತಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ತಿಳಿದು ಬರಲಿದೆ.




Leave a Reply

Your email address will not be published. Required fields are marked *

error: Content is protected !!