114 ಬರಪೀಡಿತ ತಾಲೂಕುಗಳಿಗೆ 10 ಕೆಜಿ ಅಕ್ಕಿ

153

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 114 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು. ಆ ತಾಲೂಕುಗಳಿಗೆ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಕೆ.ಹಚ್ ಮುನಿಯಪ್ಪ ಹೇಳಿದ್ದಾರೆ.

ಒಂದು ವಾರದಲ್ಲಿ ಅಕ್ಕಿ ಖರೀದಿ ಮುಗಿಯಲಿದೆ. ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಢ ಸರ್ಕಾರಗಳು ಅಕ್ಕಿ ನೀಡಲು ಮುಂದೆ ಬಂದಿದ್ದು, ಟೆಂಡರ್ ಪ್ರಕ್ರಿಯೆ ನಡೆಯಲಿದೆ. 114 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಇಲ್ಲಿ ಹಣ ನೀಡುವ ಬದಲು 10 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!