ಥಿಯೇಟರ್, ಜಿಮ್, ಈಜುಕೊಳಕ್ಕೆ ಶೇ.100ರಷ್ಟು ಅನುಮತಿ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಚಿತ್ರಮಂದಿರ, ಜಿಮ್, ಈಜುಕೊಳ, ಯೋಗಾ ಕೇಂದ್ರಗಳಲ್ಲಿ ಶೇಕಡ 100 ಸಾರ್ವಜನಿಕರಿಗೆ ಅನುಮತಿ ನೀಡಲಾಗಿದೆ. ಕೋವಿಡ್ ನಿರ್ವಹಣೆಯ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಶನಿವಾರದಿಂದಲೇ ಥಿಯೇಟರ್ ಹೌಸ್ ಫುಲ್ ಗೆ ಅವಕಾಶ ಕಲ್ಪಿಸಲಾಗಿದೆ. ಮಾಸ್ಕ್ ಧರಿಸುವುದು ಕಡ್ಡಾಯ. ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಈ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗುತ್ತೆ. ಕರೋನಾದಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆಯಾಗಿದ್ದು, ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!