ಕಲಬುರಗಿಯಲ್ಲಿ 109 ನಕಲಿ ವೈದ್ಯರು ಪತ್ತೆ

86

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಇವತ್ತಿನ ಪರಿಸ್ಥಿತಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ನಕಲಿಗಳ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಆರೋಗ್ಯ ಕ್ಷೇತ್ರದಲ್ಲಿ ಇದೊಂದು ದೊಡ್ಡ ದಂಧೆಯಾಗಿದ್ದು, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ತಿಳಿದ ಆರೋಗ್ಯ ಇಲಾಖೆ ನಕಲಿ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿದೆ.

ಆರೋಗ್ಯ ಇಲಾಖೆ, ತಹಶೀಲದ್ದಾರ್ ಹಾಗೂ ಪೊಲೀಸ್ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ 109 ನಕಲಿ ವೈದ್ಯರನ್ನು ಪತ್ತೆ ಮಾಡಿ 43 ಕ್ಲಿನಿಕ್ ಗಳನ್ನು ಬಂದ್ ಮಾಡಿಸಿದ್ದಾರೆ. ಇನ್ನು ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರ ಹಾವಳಿ ಜೋರಿದೆ. ಇದರಿಂದ ಹಳ್ಳಿಗರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಇನ್ನಷ್ಟು ಕಾರ್ಯಾಚರಣೆ ನಡೆಸಬೇಕು ಅನ್ನೋ ಅಭಿಪ್ರಾಯ ಕೇಳಿ ಬಂದಿದೆ.




Leave a Reply

Your email address will not be published. Required fields are marked *

error: Content is protected !!