ಪ್ರಧಾನಿ ಬಳಿ 12,577 ಕೋಟಿ ಪರಿಹಾರ ಬೇಡಿಕೆ

153

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕದಲ್ಲಿನ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿಗೆ ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 12,577 ಕೋಟಿ ತುರ್ತು ಪರಿಹಾರಕ್ಕೆ ಮಂಗಳವಾರ ಬೇಡಿಕೆ ಸಲ್ಲಿಸಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೊಂದಿಗೆ ಪ್ರಧಾನಿ ಭೇಟಿಯಾದರು.

ರಾಜ್ಯದ 223 ತಾಲೂಕುಗಳಲ್ಲಿ ಬರಗಾಲ ಬಿದ್ದಿದೆ. ಇದರಲ್ಲಿ 196 ತಾಲೂಕುಗಳಲ್ಲಿ ತೀವ್ರ ಬರಗಾಲವಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾಳಾಗಿದೆ. ಹೀಗಾಗಿ ಎನ್ ಡಿಎಫ್ ನಿಂದ 4,663.12 ಕೋಟಿ ಇನ್ ಪುಟ್ ಸಬ್ಸಿಡಿ, ಕುಡಿಯುವ ನೀರಿಗಾಗಿ 566.78 ಕೋಟಿ, ಜಾನುವಾರುಗಳಿಗಾಗಿ 363.68 ಕೋಟಿ ತುರ್ತು ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಣ ಎಕ್ಸ್ ನಲ್ಲಿ, ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!