15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರ ಅಧಿಸೂಚನೆ: ಸಚಿವ ಬಿ.ಸಿ ನಾಗೇಶ್

355

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನಿಗಿಸಲು ಬರೋಬ್ಬರಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, 6 ರಿಂದ 8ನೇ ತರಗತಿಗಾಗಿ 10 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದಾರೆ. ಇನ್ನು ಈಗಾಗ್ಲೇ 23 ಸಾವಿರ ಅತಿಥಿ ಶಿಕ್ಷಕರಿಂದ ಸೇವೆ ಪಡೆಯಲಾಗುತ್ತಿದ್ದು, ಇನ್ನು 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!