ಭೀಮಾನದಿ ಪಾತ್ರದಲ್ಲಿ 180 ಮೆಟ್ರಿಕ್ ಟನ್ ಅಕ್ರಮ ಮರಳು ವಶ

296

ಪ್ರಜಾಸ್ತ್ರ ಸುದ್ದಿ

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವಣಗಾಂವ ಹಾಗೂ ಶಂಬೇವಾಡ ಗ್ರಾಮದ ವ್ಯಾಪ್ತಿಯ ಭೀಮಾನದಿ ಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 180 ಮೆಟ್ರಿಕ್ ಟನ್ ಮರಳು ವಶಕ್ಕೆ ಪಡೆಯಲಾಗಿದೆ.

ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಅವರ ನೇತೃತ್ವದಲ್ಲಿ ವಿಜಯಪುರ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಿಂದಗಿ ತಹಶೀಲ್ದಾರ ಸಂಜೀವಕುಮಾರ ದಾಸರ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನ ಒಳಗೊಂಡ ತಂಡ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ 180 ಮೆಟ್ರಿಕ್ ಟನ್ ಮರಳನ್ನ ವಶಕ್ಕೆ ಪಡೆಯಲಾಗಿದೆ.

ಮೂರು ಕಡೆ ದಾಳಿ ನಡೆಸಿ ಕ್ರಮವಾಗಿ 100, 60 ಹಾಗೂ 20 ಮೆಟ್ರಿಕ್ ಟನ್‍ಗಳಂತೆ ಒಟ್ಟು 180 ಮೆಟ್ರಿಕ್ ಟನ್ ಮರಳನ್ನ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 379ರನ್ವಯ ಪ್ರಕರಣ ದಾಖಲಿಸಲಾಗಿದೆ.

ಕಳೆದ ಎರಡು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ತಾಲೂಕಾ ಮಟ್ಟದ ಟಾಸ್ಕ್ ಫೋರ್ಸ್‍ಗಳಿಗೆ ನೀಡಿದ್ದ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ. ಅನಧಿಕೃತ ಮರಳು ಸಾಗಾಣಿಕೆ ಅಥವಾ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಜಿಲ್ಲಾಧಿಕಾರಿ ಅಥವಾ ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳಿಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!