ನೇಣಿಗೆ ಶರಣಾದ ಯುವತಿ!

179

ಪ್ರಜಾಸ್ತ್ರ ಸುದ್ದಿ

ಮೈಸೂರು: ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಲಪುರಿ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ. 19 ವರ್ಷದ ಗಿರಿಜಾಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.

ನಗರದ ಪೊಲೀಸ್ ವಿಶೇಷ ವಿಭಾಗದ ಎಎಸ್ಐ ಆಗಿರುವ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ ಭಾನುವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ಬಂದು ನೋಡಿದಾಗ ವಿಷಯ ಗೊತ್ತಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅದಾಗಲೇ ಯುವತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ಗಿರಿಜಾಲಕ್ಷ್ಮಿ ನಗರದ ಟೆರೇಷಿಯನ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದಳು. ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!