ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪ್ರಥಮ ಪಿಯುಸಿಯ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಮಾರ್ಚ್ 28ರಿಂದ ಏಪ್ರಿಲ್ 13ರ ವರೆಗೆ ಪರೀಕ್ಷೆ ನಡೆಯಲಿವೆ ಎಂದು ಹೇಳಲಾಗಿದೆ.

ಪ್ರಥಮ ಪಿಯುಸಿ ಪೂರಕ ಹಾಗೂ ವಾರ್ಷಿಕ ಪರೀಕ್ಷೆಯನ್ನು ಜಿಲ್ಲಾಮಟ್ಟದಲ್ಲಿ ನಡೆಸಲು ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಮಧ್ಯಾಹ್ನ 2.30ರಿಂದ ಸಂಜೆ 4.45ರ ವೇಳಾಪಟ್ಟಿಗೆ ಅನುಗುಣವಾಗಿ ಪರೀಕ್ಷೆ ನಡೆಸಬೇಕು. ಏಪ್ರಿಲ್ 20ರೊಳಗೆ ಮೌಲ್ಯಮಾಪನ ಪೂರ್ಣಗೊಳಿಸಿ ಏಪ್ರಿಲ್ 30ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ.

ಅನುತ್ತೀರ್ಣ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ಮೇ 16 ಶುಲ್ಕ ಕಟ್ಟುವ ಕೊನೆಯ ದಿನ. ಮೇ 26ರಿಂದ ಜೂನ್ 6ರ ತನಕ ಪರೀಕ್ಷೆ ನಡೆಯಲಿವೆ. ಜೂನ್ 15ರಂದು ಫಲಿತಾಂಶ ಪ್ರಕಟವಾಗಲಿದೆ.




Leave a Reply

Your email address will not be published. Required fields are marked *

error: Content is protected !!