ತಾರಿಹಾಳ ಬಳಿ ಲಾರಿಗಳ ಅಪಘಾತ: ಚಾಲಕನ ಸ್ಥಿತಿ ಗಂಭೀರ

172

ಪ್ರಜಾಸ್ತ್ರ ಸುದ್ದಿ

ಧಾರವಾಡ: ಜಿಲ್ಲೆಯ ತಾಳಿಹಾರ ಬೈಪಾಸ್ ಹತ್ತಿರ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಲಾರಿಯೊಂದು ಪಲ್ಟಿಯಾಗಿದೆ. ಇದರಲ್ಲಿನ ಚಾಲಕನ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಹೈವೈ ಪೆಟ್ರೋಲಿಂಗ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಬ್ಬಳ್ಳಿ ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!