ಬೆಂಗಳೂರಲ್ಲಿ 21 ಕೋಟಿ ಮೌಲ್ಯದ ಡ್ರಗ್ಸ್ ವಶ

161

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಹೊತ್ತಿನಲ್ಲಿ ಮತ್ತೇರಿಸಲು ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬರೋಬ್ಬರಿ 21 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದು, ಓರ್ವ ವಿದೇಶ ಪ್ರಜೆಯನ್ನು ಬಂಧಿಸಿದ್ದಾರೆ.

ಡಿಸೆಂಬರ್ 31ರ ರಾತ್ರಿ ನಗರದ ವಿವಿಧ ಕಡೆ ನಡೆಯುವ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡಲು ಮಾದಕ ವಸ್ತು ಸಂಗ್ರಹಿಸಿ ಇಡಲಾಗಿತ್ತು. 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೇನ್, 3 ತೂಕದ ಯಂತ್ರ, ಮೊಬಲ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!