ದೆಹಲಿ ಮಹಿಳಾ ಆಯೋಗದ 223 ನೌಕರರ ವಜಾ

78

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾ ಮಾಡಲಾಗಿದೆ.

ಅಂದಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ನಿಯಮಗಳಿಗೆ ವಿರುದ್ಧವಾಗಿ ಹೆಚ್ಚುವರಿ ಸಿಬ್ಬಂದಿ ನೇಮಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. 40 ಸಿಬ್ಬಂದಿಯನ್ನು ಮಾತ್ರ ನೇಮಕ ಮಾಡಿಕೊಳ್ಳಲು ಮಹಿಳಾ ಆಯೋಗಕ್ಕೆ ಅವಕಾಶವಿದೆ.

ಹಣಕಾಸು ಇಲಾಖೆಯ ಒಪ್ಪಿಗೆ ಇಲ್ಲದೆ ಸರ್ಕಾರಕ್ಕೆ ಹೆಚ್ಚುವರಿ ವೆಚ್ಚ ಮಾಡುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!