ಬಿಜೆಪಿ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆಯಿಲ್ಲ: ರಾಹುಲ್ ಗಾಂಧಿ

170

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 24 ಜನರು ಜೀವ ಕಳೆದುಕೊಂಡಿದ್ದಾರೆ. 12 ಮಕ್ಕಳು ಸೇರಿದಂತೆ 24 ಮಂದಿ ಮೃತಪಟ್ಟಿದ್ದಾರೆ. ಇದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಖರ್ಚು ಮಾಡುತ್ತೆ. ಆದರೆ, ಮಕ್ಕಳ ಔಷಧಕ್ಕಾಗಿ ಹಣ ನೀಡುವುದಿಲ್ಲ. ಬಿಜೆಪಿ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ ಅಂತಾ ಕಿಡಿ ಕಾರಿದ್ದಾರೆ. ಇನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್ ಸೇರಿ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ.

ಒಂದು ದಿನದಿಂದ ನಾಲ್ಕು ದಿನಗಳ ಒಳಗಿನ 12 ಮಕ್ಕಳು, 6 ಪುರುಷರು, 6 ಮಹಿಳೆಯರು ಸೇರಿ 24 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹಲವರು ಹಾವಿನ ಕಡಿತದಿಂದ ಚಿಕಿತ್ಸೆಗೆ ಬಂದಿದ್ದರು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಕಳೆದ ರಾತ್ರಿ ಮತ್ತೆ 7 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 31ಕ್ಕೆ ತಲುಪಿದೆ.




Leave a Reply

Your email address will not be published. Required fields are marked *

error: Content is protected !!