ದ್ವಿತೀಯ ಪಿಯು ಪರೀಕ್ಷೆ: ಶಿಕ್ಷಣ ಸಚಿವರು ಏನಂದರು?

409

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿದಿದ್ದು, ಇನ್ನೇನಿದ್ದರೂ ದ್ವಿತೀಯ ಪಿಯುಸಿ ಪರೀಕ್ಷೆ. ಏಪ್ರಿಲ್ 22ರಿಂದ ಮೇ 18ರ ತನಕ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಈ ಬಾರಿ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ ಎಂದಿದ್ದಾರೆ.

ಇದರಲ್ಲಿ ರೆಗ್ಯೂಲರ್ 600519 ವಿದ್ಯಾರ್ಥಿಗಳು, ಪುನರಾವರ್ತಿತ 61808 ಹಾಗೂ 21928 ಖಾಸಗಿಯಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಾಗಿದ್ದಾರೆ. 10,76 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಇದಕ್ಕೆ ಸಿಬ್ಬಂದಿಸಿದಂತೆ ಸಿಸಿಟಿವಿ ಅಳವಡಿಸಲಾಗಿದೆ. ವಿಶೇಷ ಜಾಗ್ರತ ದಳಗಳನ್ನು ರಚಿಸಲಾಗಿದೆ. ಕೇಂದ್ರದಿಂದ 200 ಮೀಟರ್ ನಿಷೇಧಿತ ಪ್ರದೇಶವಾಗಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!