ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

521

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಮೇ 18ರ ತನಕ ಪರೀಕ್ಷೆಗಳು ನಡೆಯಲಿವೆ. ಮೊದಲ ದಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪರೀಕ್ಷೆ ಇದ್ದು, ಬೆಳಗ್ಗೆ 10.15ರಿಂದ 1.30ರ ತನಕ ಪರೀಕ್ಷೆ ನಡೆಯಲಿವೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ ಮಾಡಿಲ್ಲ. ಹಿಜಾಬ್ ಧಾರಣೆಗೆ ಅವಕಾಶ ನೀಡಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಎಂದು ಹೇಳಲಾಗಿದೆ. ಆದರೆ, ಅನೇಕ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಂಡು ಬಂದಿಲ್ಲ.

ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪಟ್ಟಣದಲ್ಲಿ 4 ಕಾಲೇಜು, ಮೋರಟಗಿ, ಮಲಘಾಣ ಹಾಗೂ ದೇವಣಗಾಂವದಲ್ಲಿ ಒಂದೊಂದು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿವೆ.




Leave a Reply

Your email address will not be published. Required fields are marked *

error: Content is protected !!