ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಏಪ್ರಿಲ್ 22ರಿಂದ ದ್ವಿತೀಯ ಪಿಯುಸಿ ಪ್ರಾರಂಭವಾಗಿದ್ದು ಮೇ 18ರ ತನಕ ಪರೀಕ್ಷೆ ನಡೆಯಲಿವೆ. ಇದರ ನಡುವೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಮೌಲ್ಯಮಾಪನ ನಡೆಯುತ್ತಿದೆ. ಮೇ 2ನೇ ವಾರದಲ್ಲಿ ಫಲಿತಾಂಶ ಬರಲಿದೆ. ನಿಗದಿಯಂತೆ ಜೂನ್ ನಲ್ಲಿ ಕಾಲೇಜುಗಳನ್ನು ಆರಂಭಿಸಲಾಗುವುದು. ಸಧ್ಯ ಕರೋನಾ ಕಡಿಮೆಯಿದ್ದು, ಮೇ 16ರಿಂದ ಶಾಲೆಗಳು ಪ್ರಾರಂಭವಾಗಲಿವೆ ಎಂದಿದ್ದಾರೆ.
ಮೇ 18ರ ತನಕ ಪರೀಕ್ಷೆ ನಡೆಯಲಿವೆ. ಹೀಗಿರುವಾಗ ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವುದು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ಎದುರಾಗಿದೆ.