ಜು.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ

341

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಹೀಗಾಗಿ ಎಸ್ಎಸ್ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಜುಲೈ 20ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಸ್ನೇಹಲ್.ಆರ್ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ sts.karnataka.gov.in ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳ 10ನೇ ತರಗತಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನ ಪ್ರಕಟಿಸಲಾಗಿದೆ. ಜುಲೈ 10ರ ವರೆಗೆ ವಿದ್ಯಾರ್ಥಿಗಳಿಗೆ ವೀಕ್ಷಿಸಲು ಅವಕಾಶವಿದೆ. ಇದರಲ್ಲಿ ಏನಾದ್ರು ವ್ಯತ್ಯಾಸ ಕಂಡು ಬಂದ್ರೆ ನಿಮ್ಮ ಕಾಲೇಜು ಮುಖ್ಯಸ್ಥರ ಗಮನಕ್ಕೆ ಜುಲೈ 12ರೊಳಗೆ ತರಬೇಕು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!