11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

105

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮುಂಜಾನೆ 11ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಮಾಧ್ಯಮಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದೆ. ಏಪ್ರಿಲ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಈ ಹೇಳಿದ್ದು, ಅದರಂತೆ ಇಂದು ಪಿಯುಸಿ ರಿಸಲ್ಟ್ ಬರಲಿದೆ.

ವಿದ್ಯಾರ್ಥಿಗಳು https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ನೋಡಬಹುದು. ಇದರ ಜೊತೆಗೆ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿರುವ ಸಂದರ್ಭದಲ್ಲಿ ನೀಡಿರುವ ಮೊಬೈಲ್ ನಂಬರಿಗೆ ನೇರವಾಗಿ ಫಲಿತಾಂಶ ಬರುವಂತೆ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿದೆ.

ಮಾರ್ಚ್ 9ರಿಂದ 29ರ ತನಕ ಪರೀಕ್ಷೆ ನಡೆಸಲಾಯಿತು. ಸುಮಾರು 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ. 65 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ. ಇದರಲ್ಲಿ ಸುಮಾರು 25 ಸಾವಿರ ಮೌಲ್ಯಮಾಪಕರು ಭಾಗಿಯಾಗಿದ್ದರು. 37 ವಿಷಯಗಳ 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿದೆ.




Leave a Reply

Your email address will not be published. Required fields are marked *

error: Content is protected !!