Search

ಕಲಾ ವಿಭಾಗದಲ್ಲಿ ವಿಜಯಪುರದ ವೇದಾಂತ ಪ್ರಥಮ ಸ್ಥಾನ, ಸನ್ಮಾನ

110

ಪ್ರಜಾಸ್ತ್ರ ಸುದ್ದಿ

ವಿಜಯಪುರ: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಜಿಲ್ಲೆಯು ಒಟ್ಟು ಶೇ.94.89 ಫಲಿತಾಂಶದೊಂದಿಗೆ ರಾಜ್ಯದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಫಲಿತಾಂಶ ಕುರಿತು ಮಾತನಾಡಿ, ಕಲಾ ವಿಭಾಗದಲ್ಲಿ 16. 215 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 14,174 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 4,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,725 ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 11,533 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಅದರಲ್ಲಿ 10,944 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು 5ನೇ ಸ್ಥಾನ ಹೊಂದಿತ್ತು. ಈ ವರ್ಷ ಮೂರನೇ ಸ್ಥಾನ ಪಡೆದಿದೆ. ಮುಂದಿನ ವರ್ಷದಲ್ಲಿ ಮೊದಲನೇ ಸ್ಥಾನ ಪಡೆಯಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು. ಜಿಲ್ಲೆಯ ಫಲಿತಾಂಶ ಸುಧಾರಣೆಯಲ್ಲಿ ಶ್ರಮವಹಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯಪುರದ ಎಸ್.ಎಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿಧ್ಯಾರ್ಥಿ ವೇದಾಂತ ನಾವಿ ಶೇ.99.33ರಷ್ಟು ಅಂಕಗಳನ್ನು ಪಡೆದು ರಾಜ್ಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸ ತಂದಿದೆ ಎಂದರು. ಇದೇ ವೇಳೆ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು.




Leave a Reply

Your email address will not be published. Required fields are marked *

error: Content is protected !!