ದ್ವಿತೀಯ ಪಿಯುಸಿಯಲ್ಲಿ ಫೇಲ್: ವಿದ್ಯಾರ್ಥಿನಿ ಆತ್ಮಹತ್ಯೆ

480

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಫೇಲ್ ಆದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇಪುರ ಗ್ರಾಮದ ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಡ್ಯದ ಸ್ಯಾಂತೋಂ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಗಳಿಸಿದ್ದ ಸ್ಪಂದನಾ, ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!