ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

316

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಖಾಸಗಿ ಅಪಾರ್ಟ್ ಮೆಂಟ್ ವೊಂದರ 10ನೇ ಮಹಡಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯ ಹೆಸರು ಪ್ರಕೃತಿ(18) ಎಂದು ತಿಳಿದು ಬಂದಿದೆ.

ಚಾಲುಕ್ಯ ವೃತ್ತದ ಹತ್ತಿರದ ಹೈ ಪಾಯಿಂಟ್-3 ಅಪಾರ್ಟ್ ಮೆಂಟ್ ಗೆ ಬಂದಿದ್ದಾಳೆ. ಸೆಕ್ಯೂರಿಟಿ ಗಾರ್ಡ್ ಗೆ ಸುಳ್ಳು ಹೇಳಿ ಒಳಗೆ ಹೋಗಿದ್ದಾಳೆ. ನಂತರ ಲಿಫ್ಟ್ ಮೂಲಕ 10ನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಂಜಯನಗರದ ನಿವಾಸಿ ಸಾಫ್ಟ್ ವೇರ್ ಎಂಜಿನಿಯರ್ ಅರವಿಂದ್ ಹಾಗೂ ತೇಜು ಎಂಬುವವರ ಮಗಳು ಪ್ರಕೃತಿ ಈ ರೀತಿ ಮಾಡಿಕೊಂಡಿದ್ದಾಳೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಈ ರೀತಿ ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!