ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಒಂದು ವರ್ಷಕ್ಕಿಂತ ಹೆಚ್ಚು ದಿನಗಳಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಭಾಗದ ರೈತರು ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದ್ದರು. ಲಕ್ಷಾಂತರ ರೈತರ ಹೋರಾಟ, 680 ರೈತರು ಹುತಾತ್ಮರಾಗಿದ್ದಾರೆ. ಇದೆಲ್ಲದರ ಪರಿಣಾಮ ಇದೀಗ ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ರೈತರ ಕ್ಷಮೆ ಕೇಳಿ ಪ್ರಧಾನಿ ಮೋದಿ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.