ಕಲಾವಿದರಿಗೆ 3 ಸಾವಿರ ರೂಪಾಯಿ ಪರಿಹಾರ

274

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಅನುಭವಿಸ್ತಿರುವ ರಾಜ್ಯದ ಕಲಾವಿದರಿಗೆ 3 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗ್ತಿದ್ದು, 4,82,85 ಸಾವಿರ ರೂಪಾಯಿ ಬಿಡುಗಡೆಗೆ ಮಂಜೂರಾತಿ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ರಾಜ್ಯದ 16,095 ಜನ ಬಡ ಕಲಾವಿದರು ಈ ಸೌಲಭ್ಯವನ್ನು ಪಡೆಯಲಿದ್ದಾರೆ. ಈ ಸೌಲಭ್ಯ ಪಡೆಯಲು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನ ಒಳಗೊಂಡ 5 ಜನರ ಸಮಿತಿ ಅರ್ಹ ಕಲಾವಿದರನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸುತ್ತದೆ. ನಂತರ ಕಲಾವಿದರ ಖಾತೆಗೆ ನೇರವಾಗಿ  ಪರಿಹಾರದ ಹಣ ಜಮಾ ಆಗುತ್ತದೆ. ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!