ಕಲಬುರಗಿ ಜಿಲ್ಲೆಯಲ್ಲಿ 33 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

201

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿರುವ ರಾಣಿ ಚನ್ನಮ್ಮ ವಸತಿ ಶಾಲೆಯ 33 ವಿದ್ಯಾರ್ಥಿಗಳು ಭಾನುವಾರ ರಾತ್ರಿ ಊಟವಾದ ನಂತರ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಂಭೀರವಾಗುವಂತಹದ್ದು ಏನಿಲ್ಲ ಎಂದು ಹೇಳಿದ್ದಾರೆ. ಭಾನುವಾರ ರಾತ್ರಿ ಊಟವಾದ ಮೇಲೆ ವಿದ್ಯಾರ್ಥಿನಿಯಲ್ಲಿ ತಲೆ ನೋವು, ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸೋಮವಾರ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ವಸತಿ ನಿಲಯದಲ್ಲಿ 176 ವಿದ್ಯಾರ್ಥಿನಿಯರಿದ್ದು, 33 ವಿದ್ಯಾರ್ಥಿನಿಯರಲ್ಲಿ ಹೊಟ್ಟೆ ನೋವು, ವಾಂತಿ ಆಗಿದೆ. ಕಲುಷಿತ ಆಹಾರ, ನೀರಿನಿಂದ ಆಗಿದೆ ಎನ್ನಲಾಗುತ್ತಿದೆ. ಆದರೆ, ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಏನು ಕಾರಣ ಅನ್ನೋದು ಸ್ಪಷ್ಟಪಡಿಸಬೇಕು ಅಂತಾ ಪೋಷಕರು ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!