ದೇಶದಲ್ಲಿ 3ನೇ ಹಂತದ ಮತದಾನ, ಮತ ಚಲಾಯಿಸಿದ ಪ್ರಧಾನಿ

70

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ-2024ರ 3ನೇ ಹಂತದ ಮತದಾನ ದೇಶದಲ್ಲಿ ಇಂದು ನಡೆಯುತ್ತಿದೆ. ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದೆ. 11 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

93 ಕ್ಷೇತ್ರಗಳಲ್ಲಿ ಬರೋಬ್ಬರಿ 1,300ಕ್ಕೂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 120 ಮಹಿಳಾ ಅಭ್ಯರ್ಥಿಗಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಲೋಕಸಭಾ ಕ್ಷೇತ್ರಕ್ಕೂ ಇಂದೇ ಮತದಾನ ನಡೆಯುತ್ತಿದೆ.

ಇನ್ನು ಪ್ರಧಾನಿ ಮೋದಿ ತವರು ರಾಜ್ಯವಾದ ಗುಜರಾತಿನ ಅಹಮದಾಬಾದ್ ನಗರದ ಬೂತ್ ನಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮಧ್ಯಪ್ರದೇಶದ ಮಾಜಿ ಮುಖ್ಯಮಮಂತ್ರಿಗಳಾದ ದಿಗ್ವಜಯ್ ಸಿಂಗ್, ಶಿವರಾಜ್ ಸಿಂಗ್ ಚೌವ್ಹಾಣ್ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಕಣದಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!