ಪ್ರಜಾಸ್ತ್ರ ಸುದ್ದಿ
ನವದೆಹಲಿ: ಲೋಕಸಭಾ ಚುನಾವಣೆಯ 3ನೇ ಹಂತದ ಮತದಾನ ದೇಶದ 11 ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಈ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನ ಉಳಿಸುವುದಕ್ಕಾಗಿ ಎಂದಿದ್ದಾರೆ.
ಇದು ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರದ ವಿರುದ್ಧದ ಹೋರಾಟದ ಚುನಾವಣೆ. ಪ್ರತಿಯೊಬ್ಬರ ಮತ ಸಹ ಮುಖ್ಯ. ವಿವೇಚನೆ ಹಾಗೂ ಚಿಂತನಾಶೀಲರಾಗಿ ನಿಮ್ಮ ಹಾಗೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ. ಭಾರತ ಗೆಲ್ಲುತ್ತದೆ ಎಂದಿದ್ದಾರೆ.