ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

300

ಪ್ರಜಾಸ್ತ್ರ ಸುದ್ದಿ

ರಾಯಚೂರು: ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವುದು ತಿಳಿದು ಬಂದಿದೆ.

ಕಾಲೇಜಿಗೆ ಹೋದವರು ಮನೆಗೆ ವಾಪಸ್ ಆಗಿಲ್ಲವೆಂದು ಪೋಷಕರು ದೂರು ನೀಡಿದ್ದಾರೆ. ಸದರಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ಈ ಘಟನೆಯಿಂದ ಕುಟುಂಬಸ್ಥರು ಸೇರಿದಂತೆ ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ.




Leave a Reply

Your email address will not be published. Required fields are marked *

error: Content is protected !!