ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 5, 8 ಹಾಗೂ 9ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ಸಾಕಷ್ಟು ಗೊಂದಲ ಮೂಡುವಂತಹ ಕೆಲಸಗಳು ನಡೆಯುತ್ತಿವೆ. ಈಗಾಗ್ಲೇ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದು, ಈಗ ಪರೀಕ್ಷೆ ಮುಂದೂಡಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
ಮುಂದಿನ ಆದೇಶದ ತನಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಮೊದಲು ರೂಪ್ಸಾ ಹೈಕೋರ್ಟ್ ಮೆಟ್ಟಿಲು ಇರುತ್ತು. ಅಲ್ಲಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಬಂದಿತ್ತು. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಅಲ್ಲಿ ಆದೇಶಕ್ಕೆ ತಡೆ ನೀಡಿದ ಹಿನ್ನಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ನೋಡಿದರೆ ಪರೀಕ್ಷೆ ಮುಂದೂಡಿ ಆದೇಶಿಸಲಾಗಿದೆ.