ಟಿ-20 ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ 5 ಕೋಟಿ

127

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: 19 ವರ್ಷದೊಳಗಿನವರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಭಾರತದ ಮಹಿಳಾ ತಂಡಕ್ಕೆ 5 ಕೋಟಿ ರೂಪಾಯಿ ಘೋಷಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ ಶಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ವಿಶ್ವಕಪ್ ಗೆದ್ದ ತಂಡ ಹಾಗೂ ಸಿಬ್ಬಂದಿಗೆ 5 ಕೋಟಿ ರೂಪಾಯಿ ಘೋಷಿಸಿದ್ದಾರೆ. ಇದೆ ಮೊದಲ ಬಾರಿಗೆ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ಟೂರ್ನಿ ನಡೆಸಲಾಗಿದೆ. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ 17.1 ಓವರ್ ಗಳಲ್ಲಿ ಕೇವಲ 68 ರನ್ ಗಳಿಗೆ ಆಲೌಟ್ ಆಯಿತು.

ಸಾಧಾರಣ ರನ್ ಬೆನ್ನು ಹತ್ತಿದ ಟೀಂ ಇಂಡಿಯಾ 14 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 69 ರನ್ ಗಳಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು. ತ್ರಿಷಾ 24, ಸೌಮ್ಯ 24 ರನ್ ಗಳಿಸಿದರು. ತಂಡದ ನಾಯಕತ್ವ ವಹಿಸಿಕೊಂಡಿರುವ ಶಫಾಲಿ ವರ್ಮಾ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೂರ್ನಿಯಲ್ಲಿ ಇತಿಹಾಸ ಬರೆದರು.




Leave a Reply

Your email address will not be published. Required fields are marked *

error: Content is protected !!