ಪಂಚ ರಾಜ್ಯ ಫೈಟ್: ಯುಪಿಯಲ್ಲಿ 7 ಹಂತದ ಮತದಾನ

530

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಉತ್ತಾರಖಂಡ ಹಾಗೂ ಗೋವಾ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಈ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಪಂಜ ರಾಜ್ಯ ಚುನಾವಣೆಯ ಜಿದ್ದಾಜಿದ್ದಿಗೆ ಮುಹೂರ್ತ ಫಿಕ್ಸ್ ಆಗಿದೆ.

ಉತ್ತರ ಪ್ರದೇಶದಲ್ಲಿ 7 ಹಂತ, ಮಣಿಪುರ 2 ಹಂತ ಹಾಗೂ ಉಳಿದ ಮೂರು ರಾಜ್ಯಗಳಲ್ಲಿ 1 ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10 ರಿಂದ ಐದು ರಾಜ್ಯಗಳಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರ ತನಕ 7 ಹಂತದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಬರೋಬ್ಬರಿ 403 ವಿಧಾನಸಭಾ ಸ್ಥಾನಗಳಿವೆ. ಮಣಿಪುರದಲ್ಲಿ ಫೆಬ್ರವರಿ 27 ಹಾಗೂ ಮಾರ್ಚ್ 3ರಂದು ಮತದಾನ. ಉತ್ತಾರಖಂಡ, ಪಂಜಾಬ್ ಹಾಗೂ ಗೋವಾದಲ್ಲಿ ಫೆಬ್ರವರಿ 14ರಂದು ಒಂದು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!