ಪಂಚ ರಾಜ್ಯ ಚುನಾವಣೆ: ತಿಂಗಳಾಂತ್ಯಕ್ಕೆ ದಿನಾಂಕ ಘೋಷಣೆ?

214

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಈ ವರ್ಷದ ಕೊನೆಯಲ್ಲಿ ಹಾಗೂ 2024ರ ಆರಂಭದಲ್ಲಿ ನಡೆಯಲಿರುವ ಪಂಚ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ, ಈ ತಿಂಗಳಾಂತ್ಯಕ್ಕೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ.

ಚುನಾವಣೆ ಆಯೋಗ ಮುಖ್ಯಸ್ಥರ ರಾಜೀವಕುಮಾರ್ ನೇತೃತ್ವದ ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆಯಾ ರಾಜ್ಯಗಳಲ್ಲಿ ನಡೆಯಲಿರುವ ಧಾರ್ಮಿಕ ಆಚರಣೆಗಳು, ಶೈಕ್ಷಣಿಕ ಪರೀಕ್ಷೆಗಳು, ಮತದಾರರ ಪಟ್ಟಿ ಪರಿಶೀಲನೆ, ಅಲ್ಲಿನ ಪರಿಸ್ಥಿತಿ ಸೇರಿದಂತೆ ಎಲ್ಲದರ ಪರಿಶೀಲನೆ ಬಳಿಕ ದಿನಾಂಕ ಘೋಷಣೆಯಾಗಲಿದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ತೆಲಂಗಾಣ ಹಾಗೂ ವಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದೆ. ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾ ನಿರ್ದೇಶಕರು ಆಯೋಗಕ್ಕೆ ನೀಡುವ ವರದಿ ಮೇಲೆ ಸಕಲ ಸಿದ್ಧತೆಗಳು ನಡೆಯಲಿವೆ. ಇದು ಮುಗಿಯುತ್ತಿದ್ದಂತೆ ಲೋಕಸಭಾ ಚುನಾವಣೆಯ ಕದನ ಶುರುವಾಗಲಿದೆ.




Leave a Reply

Your email address will not be published. Required fields are marked *

error: Content is protected !!