ಪಂಚ ರಾಜ್ಯ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

133

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಈ ವರ್ಷಾಂತ್ಯಕ್ಕೆ ಛತ್ತೀಸಗಡ, ಮಿಜೋರಾಂ, ಮಧ್ಯಪ್ರದೇಶ, ರಾಜಸ್ತಾನ್ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿವೆ. ಹೀಗಾಗಿ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಛತ್ತೀಸಗಡ, ಮಧ್ಯಪ್ರದೇಶ, ತೆಲಂಗಾಣ ರಾಜ್ಯಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ 144 ಅಭ್ಯರ್ಥಿಗಳು, ತೆಲಂಗಾಣದಲ್ಲಿ 55 ಹಾಗೂ ಛತ್ತೀಸಗಡದಲ್ಲಿ 30 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಮಧ್ಯಪ್ರದೇಶ ಮಾಜಿ ಸಿಎಂ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮನಾಥ್ ಚಿಂಡ್ ವಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಛತ್ತೀಸಗಡ ಸಿಎಂ ಭೂಪೇಶ್ ಪಾಟ್ನಾದಿಂದ, ಡಿಸಿಎಂ ಟಿಎಸ್ ಸಿಂಗ್ ಡಿಯೋ ಅಂಬಿಕಾಪುರದಿಂದ ಸ್ಪರ್ಧಿಸುತ್ತಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಕೊಡಂಗಲ್ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿದ್ದಾರೆ.

ಮಧ್ಯಪ್ರದೇಶ 230, ತೆಲಂಗಾಣ 119 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 90 ಸ್ಥಾನಗಳನ್ನು ಹೊಂದಿರುವ ಛತ್ತೀಸಗಡದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಐದು ರಾಜ್ಯಗಳ ಫಲಿತಾಂಶ ಹೊರಬೀಳಲಿದೆ.




Leave a Reply

Your email address will not be published. Required fields are marked *

error: Content is protected !!