ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ

210

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಣಿವೆನಾಡು ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಸೆಣಸಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರು ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಸುಮಾರು 9.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂತಿಮ ಗೌರವ ಸಲ್ಲಿಸಿದರು.

ಇನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸೇರಿ ಗಣ್ಯರು ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿಎಂ, ಪ್ರಾಂಜಲ್ ಅವರು ದೇಶಸೇವೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಹೆಗಲು ಕೊಡುವ ದೃಷ್ಟಿಯಿಂದ ಸರ್ಕಾರದಿಂದ 50 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದರು.

ಇಂದು ಮುಂಜಾನೆಯಿಂದ ಮಧ್ಯಾಹ್ನದ ತನಕ ಸಾರ್ವಜನಿಕರಿಗೆ, ಸೈನಿಕರ ಕುಟುಂಬಸ್ಥರಿಗೆ ಹಂತ ಹಂತವಾಗಿ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಂತರ ವಿಧಿವಿಧಾನಗಳು ನಡೆದು, ನಗರದ ಕಲ್ಲುಬಾಳು ಕ್ರಾಸ್, ಜಿಗಣಿ ಸರ್ಕಲ್, ಉಡುಪಿ ಗಾರ್ಡನ್ ರಿಂಗ್ ರೋಡ್ ಮಾರ್ಗದ ಮೂಲಕ ಮೆರವಣಿಗೆ ಸಾಗಿ ಹೊಸೂರು ಬೆಂಗಳೂರು ಹೆದ್ದಾರಿಯಲ್ಲಿರುವ ಕೊಡ್ಲು ವಿದ್ಯುತ್ ಚಿತಾಗರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

29 ವರ್ಷದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63ನೇ ರಾಷ್ಟ್ರೀಯ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ನವೆಂಬರ್ 22ರಂದು ರಜೌರಿ ಸೆಕ್ಟರ್ ನಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಹೋರಾಟದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!