ವಿಜಯಪುರ ಜಿಲ್ಲೆಯಲ್ಲಿ 6 ಕೋವಿಡ್ ಕೇರ್ ಸೆಂಟರ್

265

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದಲ್ಲಿ 2 ಹಾಗೂ ಪ್ರತಿ ತಾಲೂಕಿಗೆ 1ರಂತೆ 6 ಕೋವಿಡ್ ಕೇರ್ ಸೆಂಟರ್ ಶುರು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಜಿಲ್ಲೆಯ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿ ಮಾತ್ನಾಡಿದರು.

ಕೋವಿಡ್ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಲಸಿಕೆ ಹಾಗೂ ಬೆಡ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಇದೊಂದು ರೂಪಾಂತರ ವೈರಸ್ ಆಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಸಮಸ್ಯೆ ಬರಬಹುದು. ಇದಕ್ಕಾಗಿ ಮುಂಜಾಗ್ರತ ಕ್ರಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸೂಚನೆ ನೀಡಿದ್ರು.

ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸಿಬ್ಬಂದಿ ಅವಶ್ಯಕತೆಯಿದ್ದರೆ ಪಾರದರ್ಶಕವಾಗಿ ನೇಮಕ ಮಾಡಿಕೊಳ್ಳಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವಿರುದ್ಧ ದೂರು ಸಾಕಷ್ಟು ಕೇಳಿ ಬರ್ತಿದ್ದು, ಸಾಕಷ್ಟು ಚಟುವಟಿಕೆಯಿಂದ ಕೆಲಸ ಮಾಡಬೇಕು. ಲಸಿಕೆ ಕಾರ್ಯಕ್ರಮ ಶೇಕಡ 100ರಷ್ಟು ಆಗುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ರು.

ಈ ವೇಳೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಶಾಸಕರಾದ ಎಂ.ಬಿ ಪಾಟೀಲ, ಶಿವಾನಂದ ಪಾಟೀಲ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತ ಕಳ್ಳಿಮನಿ, ಜಿಲ್ಲಾ ಪಂಚಾಯ್ತಿ ಸಿಇಓ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!