ನಮ್ಮ ಬ್ಯಾಂಕ್ ಖಾತೆಗಳಿಂದ ಐಟಿ ಇಲಾಖೆ 65 ಕೋಟಿ ವಿತ್ ಡ್ರಾ: ಕಾಂಗ್ರೆಸ್

102

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರಿದ ವಿವಿಧ ಬ್ಯಾಂಕ್ ಖಾತೆಗಳಿಂದ ಐಟಿ ಇಲಾಖೆ 65 ಕೋಟಿ ವಿತ್ ಡ್ರಾ ಮಾಡಿಕೊಂಡಿದೆ ಎಂದು ಆರೋಪಿಸಿದೆ. ಎಐಸಿಸಿ ಖಜಾಂಚಿ ಅಜಯ್ ಮಾಕೆನ್ ಬುಧವಾರ ಮಾತನಾಡಿ, ಹಿಂದಿನ ವರ್ಷಗಳ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಕರಣ ಕೋರ್ಟ್ ನಲ್ಲಿರುವಾಗಲೇ 65 ಕೋಟಿ ರೂಪಾಯಿ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವದ ನಡೆ ಅಲ್ಲ ಎಂದು ಕಿಡಿ ಕಾರಿದ್ದಾರೆ.

ಆದಾಯ ತೆರಿಗೆಯಲ್ಲಿ ವ್ಯತ್ಯಾಸ ಬಂದಿದೆ ಎಂದು ಹೇಳಿ 210 ಕೋಟಿ ರೂಪಾಯಿ ವಸೂಲಿ ಮಾಡಲು ಐಟಿ ಇಲಾಖೆ ಮುಂದಾಗಿದೆ. ಮೇಲ್ಮನವಿ ಪ್ರಾಧಿಕಾರಿದಲ್ಲಿ ಪ್ರಕರಣ ಬಾಕಿ ಇರುವಾಗಲೇ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ರೂಪಾಯಿ ಹಿಂತೆಗೆದುಕೊಂಡಿರುವುದು ಸರಿಯಲ್ಲ. ಆದರೆ, ಕಾಂಗ್ರೆಸ್ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿದೆ ಎಂದು ಅಜಯ್ ಮಾಕೆನ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!