ಬೆಂಕಿ ಅನಾಹುತ: 7 ಜನರ ಸಾವು, 40 ಮಂದಿಗೆ ಗಾಯ

251

ಪ್ರಜಾಸ್ತ್ರ ಸುದ್ದಿ

ಮುಂಬೈ: ಗೋರೆಗಾಂವ್ ದಲ್ಲಿನ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅನಾಹುತದಿಂದಾಗಿ 7 ಜನರು ಪ್ರಾಣ ಕಳೆದುಕೊಂಡಿದ್ದು, 40 ಜನರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಶುಕ್ರವಾರ ಮುಂಜಾನೆ ಸುಮಾರು 3 ಗಂಟೆಯ ಸುಮಾರಿಗೆ ಈ ಅನಾಹುತ ನಡೆದಿದೆ. ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಎಲ್ಲೆಡೆ ವ್ಯಾಪಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾರ್ಕಿಂಗ್ ಪ್ರದೇಶದಲ್ಲಿ ಬಟ್ಟೆಯೊಂದಕ್ಕೆ ಹೊತ್ತಿಕೊಂಡಿದ್ದ ಬೆಂಕಿಯಿಂದಾಗಿ ಇಷ್ಟು ದೊಡ್ಡ ಅನಾಹುತ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ತನಿಖೆ ಬಳಿಕ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ. ಬೆಂಕಿ ಅವಗಡದಿಂದ ಅಪಾರ ಪ್ರಮಾಣ ಆಸ್ತಿಪಾಸ್ತಿ ಹಾನಿಯಾಗಿದೆ. ಬೈಕ್ ಹಾಗೂ ಕಾರುಗಳು ಬೆಂಕಿಗೆ ಆಹುತಿಯಾಗಿವೆ.




Leave a Reply

Your email address will not be published. Required fields are marked *

error: Content is protected !!