ದೇಶ್ಯಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ

150

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೇಶದ ತುಂಬಾ ಇಂದು 74ನೇ ಗಣರಾಜ್ಯೋತ್ಸವವನ್ನು ತುಂಬಾ ಸಂಭ್ರಮ ಸಡಗರಿಂದ ಆಚರಿಸಲಾಗುತ್ತಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೇನಾಪಡೆ ಪಥಸಂಚಲನ ಸೇರಿದಂತೆ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಶಕ್ತಿ ಪ್ರದರ್ಶನ ನಡೆಯಲಿದೆ. ಜೊತೆಗೆ ವಿವಿಧ ರಾಜ್ಯಗಳ ಟ್ಯಾಬ್ಲೋ(ಸ್ತಬ್ಧಚಿತ್ರ) ಪ್ರದರ್ಶನವಿರಲಿದೆ.

ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ, ಗಣ್ಯರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಸೇನಾ ಪಡೆಯ ಮುಖ್ಯಸ್ಥರು ಸೇರಿದಂತೆ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

ಈಜಿಪ್ಟ್ ಅಧ್ಯಕ್ಷರೊಂದಿಗೆ ಇಂದು 5 ಒಪ್ಪಂದಗಳಿಗೆ ಎರಡು ದೇಶಗಳ ನಾಯಕರು ಸಹಿ ಹಾಕಲಿದ್ದಾರೆ. ದ್ವಿಪಕ್ಷೀಯ ಒಪ್ಪಂದಲ್ಲಿ 12 ಕೋಟಿ ಡಾಲರ್ ಮೌಲ್ಯದ ವ್ಯವಹಾರ ನಡೆಯಲಿದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳ ಪ್ರದಾನ ಸಮಾರಂಭ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!