ವಿಜಯಪುರ ಜಿಲ್ಲೆಯಾದ್ಯಂತ 24 ಗಂಟೆಯಲ್ಲಿ 8.95 ಮಿ.ಮಿ ಮಳೆ

216

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 8.95 ಮಿಲಿ ಮೀಟರ್ ಮಳೆಯಾಗಿದೆ. ಶನಿವಾರ ಸಹ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದೆ. ಮುದ್ದೇಬಿಹಾಳ, ವಿಜಯಪುರ, ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ಭಾಗದಲ್ಲಿ ಮಳೆ ಸುರಿಯುತ್ತಿದೆ.

 ಮುದ್ದೇಬಿಹಾಳ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶೇಕಡ 52.9 ಮಿಲಿ ಮೀಟರ್ ಮಳೆಯಾಗಿದೆ. ಇದರ ಪರಿಣಾಮ ಅಡವಿ-ಹುಲಗಬಾಳ ಗ್ರಾಮಗಳ ನಡುವೆ ನಿರ್ಮಿಸಿದ್ದ ಸೇತುವೆ ಸಂಪೂರ್ಣ ಕುಸಿದಿದ್ದು, ರಸ್ತೆ ಸಂಪರ್ಕ ಕಡಿದುಕೊಂಡಿದ್ದಾರೆ.

ತಾಳಿಕೋಟೆಯಲ್ಲಿ 12.6 ಹಾಗೂ ಬಸವನ ಬಾಗೇವಾಡಿಯಲ್ಲಿ 9.1 ಮಿಲಿ ಮೀಟರ್ ಮಳೆಯಾಗಿದೆ. ತಾಳಿಕೋಟೆಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಕೊಚ್ಚಿ ಹೋಗಿದೆ. ಹೀಗಾಗಿ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.




Leave a Reply

Your email address will not be published. Required fields are marked *

error: Content is protected !!