86ನೇ ಅಕ್ಷರ ಜಾತ್ರೆಗೆ ದಿನಾಂಕ ನಿಗದಿ

281

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯುತ್ತಿದ್ದು, ದಿನಾಂಕ ನಿಗದಿಯಾಗಿದೆ. ಫೆಬ್ರವರಿ 26ರಿಂದ 28ರ ವರೆಗೂ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ.

ಪರಿಷತ್ ರಾಜ್ಯಾಧ್ಯಕ್ಷ ಮನು ಬಳಿಗಾರ ನೇತೃತ್ವದಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೋವಿಡ್ ಇಳಿಮುಖ ಕಾಣ್ತಿರುವುದ್ರಿಂದ ಅಕ್ಷರ ಜಾತ್ರೆಗೆ ಮಾರ್ಗಸೂಚಿಯಲ್ಲಿ ಒಂದಿಷ್ಟು ಸಡಿಲಿಕೆ ಮಾಡಬೇಕು ಅನ್ನೋ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮನವಿ ಸಲ್ಲಿಸುವ ಪ್ರಸ್ತಾಪವಾಗಿದೆ.

ದಿನಾಂಕ ನಿಗದಿ ಸಂಬಂಧ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ ಪಾಟೀಲ, ಶಾಸಹ ನೆಹರೂ ಓಲೇಕಾರ ಅವರೊಂದಿಗೆ ಚರ್ಚಿಸಲಾಗಿತ್ತು ಎಂದು ಮನು ಬಳಿಗಾರ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!