ಸರ್ಕಾರದ ಯೋಜನೆಯಲ್ಲಿ 9 ಬೀಫ್ ಅಂಗಡಿಗಳಿಗೆ ಅನುಮತಿ

167

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಪ್ರಧಾನಿ ಮೋದಿ ಅವರ ಮಹತ್ವದ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದಲ್ಲಿ ಸೆಂಟ್ರಲ್ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. 114 ಕೋಟಿ ರೂಪಾಯಿ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗುತ್ತಿದ್ದು, ಇಲ್ಲಿ 9 ಬೀಫ್ ಸ್ಟಾಲ್ ಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ.

ಗೋಹತ್ಯೆ ನಿಷೇಧವನ್ನು ಜಾರಿಗೆ ತಂದಿರುವ ಸರ್ಕಾರ ಹಾಗೂ ಹಿಂದೂ ಧರ್ಮದ ಪ್ರಕಾರ ಗೋವಿಗೆ ಪವಿತ್ರ ಸ್ಥಾನವಿದೆ. ಅದನ್ನು ಪೂಜೆ ಮಾಡಲಾಗುತ್ತೆ ಎಂದು ಹೇಳುವ ಬಿಜೆಪಿ ಸರ್ಕಾರದಿಂದಲೇ ಬೀಫ್ ಸ್ಟಾಲ್ ನಿರ್ಮಾಣಕ್ಕೆ ಅನುಮತಿ ಕೊಟ್ಟಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಲವು ರೀತಿ ಟ್ರೋಲ್ ಗಳು ನಡೆಯುತ್ತಿವೆ.




Leave a Reply

Your email address will not be published. Required fields are marked *

error: Content is protected !!