ದಾಖಲೆ ಇಲ್ಲದ 9 ಕೆಜಿ ಚಿನ್ನಾಭರಣ ಜಪ್ತಿ

180

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಾಖಲೆ ಇಲ್ಲದ ಕೋಟಿ ಕೋಟಿ ಹಣ, ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿರುವ ಸೀರೆ, ಕುಕ್ಕರ್, ಮಿಕ್ಸರ್ ಸೇರಿ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗುತ್ತಿದೆ. ಇಂದು 2.30 ಕೋಟಿ ಮೌಲ್ಯದ 9 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ತರಿಕೇರಿ ಪಟ್ಟಣದ ಪೊಲಿಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ವ್ಯಕ್ತಿಗಳು ನಾಲ್ಕು ಬಾಕ್ಸ್ ಗಳಲ್ಲಿ ಚಿನ್ನಾಭರಣ, ಚಿನ್ನದ ಬಿಸ್ಕತ್ ಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಪೊಲೀಸರು ಚೆಕ್ ಮಾಡಿ ವಶಕ್ಕೆ ಪಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!