92 ಸಂಸದರ ಅಮಾನತು: ‘ಇಂಡಿಯಾ’ ಟೀಂ ಪ್ರತಿಭಟನೆ

134

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಂಸತ್ ಭವನದೊಳಗೆ ಇಬ್ಬರು ನುಗ್ಗಿ ಅವಾಂತರ ಸೃಷ್ಟಿಸಿದ ಘಟನೆ ಸಂಬಂಧ ವಿಪಕ್ಷಗಳು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರ ಬಯಸಿವೆ. ಕಲಾಪಕ್ಕೆ ಅಡ್ಡಿ ಪಡಿಸಿದ್ದರು. ಹೀಗಾಗಿ ಲೋಕಸಭೆ, ರಾಜ್ಯಸಭೆ ಸೇರಿ 92 ಸಂಸದರನ್ನು ಅಮಾನತು ಮಾಡಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಮೊದಲು ಆಗಿದೆ.

ಸಂಸದರ ಅಮಾನತು ಖಂಡಿಸಿ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಸತ್ ಕಲಾಪದ ಅಣಕು ಪ್ರದರ್ಶನ ಮಾಡಲಾಯಿತು. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಸಭಾಧ್ಯಕ್ಷರ ಅನುಕರಣೆ ಮಾಡಿದರು. ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!