ಪ್ರಜಾಸ್ತ್ರ ಕ್ರೀಡಾ ಸುದ್ದಿ
ಇಂಡಿಯನ್ ಬ್ಯಾಡ್ಮಿಟನ್ ಸ್ಟಾರ್ ಜ್ವಾಲಾ ಗುಟ್ಟಾ ಇಂದು ತಮ್ಮ 37ನೇ ವರ್ಷದ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಇದರ ಜೊತೆಗೆ ಎಂಗೇಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಸಂಸಾರಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.
ನಟ ವಿಷ್ಣು ವಿಶಾಲ ಜೊತೆ ಹೈದ್ರಾಬಾದ್ ನಲ್ಲಿ ಜ್ವಾಲಾ ಗುಟ್ಟಾ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಂದು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ನಟ ವಿಷ್ಣು ವಿಶಾಲ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜ್ವಾಲಾ 2010ರ ಕಾಮನ್ ವೆಲ್ತ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.