ಪ್ರಜಾಸ್ತ್ರ ಸುದ್ದಿ
ಹಾವೇರಿ: ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ, ಕರ್ನಾಟಕ ಬಯಲಾಟ ಅಕಾಡಮಿ ಅಧ್ಯಕ್ಷ ಡಾ.ಟಿ.ಬಿ ಸೊಲಬಕ್ಕನವರ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. 73 ವಯಸ್ಸಿನ ಸೋಲಬಕ್ಕನವರ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಿಗ್ಗಾಂವಿಯ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್, ಆಲಮಟ್ಟಿಯ ರಾಕ್ ಗಾರ್ಡನ್ ರೂವಾರಿ. ಬೆಂಗಳೂರಿನ ಜಕ್ಕೂರಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನಿರ್ಮಿಸಲಾದ ಮಾದರಿ ಗ್ರಾಮದ ಪರಿಕಲ್ಪನೆಯನ್ನ ಸಾಕಾರಗೊಳಿಸಿದವರು.
ತಮ್ಮ ಅದ್ಭುತ ಕಲೆಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಸಂಪಾದಿಸಿದ್ರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನ ಪಡೆದಿದ್ದಾರೆ. ಮೃತರ ಅಂತ್ಯಕ್ರಿಯೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ದುಂಡಸಿ ಗ್ರಾಮದ ಜಮೀನಿನಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.