ಪ್ರಜಾಸ್ತ್ರ ಸುದ್ದಿ
ರಾಯಚೂರು: ಮೊಹರಂ ಹಬ್ಬದ ಸಂದರ್ಭದಲ್ಲಿ ಇಬ್ಬರ ಪ್ರಾಣ ಹೋದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಸಮತೆಕೆಲ್ಲೂರಿನಲ್ಲಿ ನಡೆದಿದೆ. ಮೆರವಣಿಗೆ ವೇಳೆ ದೇವರನ್ನ ಹೊತ್ತುಕೊಂಡಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ್ದಾರೆ.
ದೇವರನ್ನ ಹೊತ್ತುಕೊಂಡಿದ್ದ 50 ವರ್ಷದ ಹುಸೇನ್ ಸಾಬ್ ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.