ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಳೆದ ರಾತ್ರಿ ನಡೆದಿದೆ. ಯಲಹಂಕ ಮಾರ್ಗವಾಗಿ ಏರ್ ಪೋರ್ಟ್ ಗೆ ಹೊರಟಿದ್ದ ಲ್ಯಾನ್ಸರ್ ಕಾರು ಡಿವೈಡರ್ ಗೆ ಗುದ್ದಿ ಪಕ್ಕದ ರಸ್ತೆಗೆ ಹೋಗಿದೆ.
ಹೀಗೆ ಡಿವೈಡರ್ ದಾಟಿ ಆ ಕಡೆ ಹೋಗಿದ್ದರಿಂದ ಏರ್ ಪೋರ್ಟ್ ಕಡೆಯಿಂದ ಬರುತ್ತಿದ್ದ ಪೋಕ್ಸ್ ವ್ಯಾಗನ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.