ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಹೊಲದಲ್ಲಿರುವ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಕೊಲೆಯಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ. ಅಶೋಕ ಕುಂಬಾರ ಕೊಲೆಯಾದ ದುರ್ದೈವಿ.
ಜಮೀನನಲ್ಲಿರುವ ರಸ್ತೆ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ ಇತ್ತಂತೆ. ಇದೇ ವಿಚಾರವಾಗಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಸವನಬಾಗೇವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.