ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜೈನಾಪುರ ಹತ್ತಿರ ನಡೆದಿದೆ. ಬೈಕ್ ಚಲಾಯಿಸಿದ್ದವನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಚಿಕ್ಕೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಹತ್ತಿರ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಈ ವೇಳೆ ಮಹಿಳೆ ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.