ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಎಸ್ಐ ಮರು ನೇಮಕಾತಿ ಪರೀಕ್ಷೆಯನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳು ಭರವಸೆ ಕಳೆದುಕೊಳ್ಳಬಾರದು. ಶೀಘ್ರದಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದರು.
ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದ 56 ಸಾವಿರ ಅಭ್ಯರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದಾರೆ. ಈ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ ಎಂದು ಗೃಹ ಸಚಿವರು ಹೇಳಿದ್ದಾರೆ.